ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Sunday 24 July 2011

ಮುಗಿಲ ಮಾರಿಗೆ ರಾಗರತಿಯ ನಂಜ ಏರಿತ್ತ / Mugila maarige Raga ratiya

ರಚನೆ ; ದ. ರಾ. ಬೇಂದ್ರೆ.


ಮುಗಿಲ ಮಾರಿಗೆ ರಾಗರತಿಯ ನಂಜ ಏರಿತ್ತ 
ಆಗ ಸಂಜೆ ಆಗಿತ್ತ;
ನೆಲದ ಅಂಚಿಗೆ ಮಂಜಿನ ಮುಸುಕು ಹ್ಯಾಂಗೋ ಬಿದ್ದಿತ್ತ 
ಗಾಳಿಗೆ ಮೇಲಕ್ಕೆದ್ದಿತ್ತ .

ಬಿದಿಗಿ ಚಂದ್ರನ ಚೊಗಚೀ-ನಗಿ-ಹೂ ಮೆಲ್ಲಗ ಮೂಡಿತ್ತ
ಮ್ಯಾಲಕ ಬೆಳ್ಳಿನ ಕೂಡಿತ್ತ; 
ಇರುಳ ಹೆರಳಿನಾ ಅರಳಮಲ್ಲಿಗೀ ಜಾಳಿಗಿ ಹಾಂಗೆತ್ತ 
ಸೂಸ್ಯಾವ ಚಿಕ್ಕಿ ಅತ್ತಿತ್ತ.

೩ 
ಬೊಗಸಿಗಣ್ಣಿನಾ ಬಯಕೆಯ ಹೆಣ್ಣು ನೀರಿಗೆ ಹೋಗಿತ್ತ 
ತಿರುಗಿ ಮನೀಗೆ ಸಾಗಿತ್ತ;
ಕಾಮಿ ಬೆಕ್ಕಿನ್ಹಾಂಗ  ಭಾ0ವೀ ಹಾದಿ ಕಾಲಾಗಸುಳಿತಿತ್ತ
ಎರಗಿ ಹಿಂದಕ್ಕುಳಿತಿತ್ತ.


ಮಳ್ಳಗಾಳಿ-ಸುಳಿ ಕಳ್ಳ ಕೈಲೆ ಸೆರಗನು ಹಿಡಿದಿತ್ತ
ಮತಮತ ಬೆರಗಿಲೆ ಬಿಡತಿತ್ತ;
ಒಂದ ಮನದ ಗಿಣಿ ಹಿಂದ ನೆಳ್ಳಿಗೆ ಬನ್ನಿಲೆ ಬರತಿತ್ತ
ತನ್ನ ಮೈಮರ ಮರತಿತ್ತ

19 comments:

  1. o gret
    nange thumba ista aayitu

    ReplyDelete
  2. ತುಂಬಾ ಒಳ್ಳೆಯ ಭಾವಗೀತೆ....

    ReplyDelete
  3. ಈ ಗೀತೆಯ ಭಾವಾರ್ಥ ಬೇಕಾಗಿತ್ತು

    ReplyDelete
    Replies
    1. Youtube ಅಲ್ಲಿ ಕೇಳಿ ಅರ್ಥವಾಗುತ್ತೆ

      Delete
  4. Love you Bendre...

    ReplyDelete
  5. ಈ ಭಾವಗೀತೆ ಕೇಳುವಾಗ ಭಾವ ತುಂಬಿ ಬಂತು

    ReplyDelete
  6. ಶೃಂಗಾರದ ಸುಳಿಗೆ ಬೊಗಸೆಗಣ್ಣಿನ ಹೆಣ್ಣು ಸಿಲುಕಿಕೊಂಡಿದ್ದಾಳೆ .

    ReplyDelete
  7. ಈ ಹಾಡಿನ ಭಾವಾರ್ಥ ಬೇಕು..

    ReplyDelete
  8. ತುಂಬಾ ಅರ್ಥಗರ್ಭಿತ ಹಾಡು 👌

    ReplyDelete