ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.
Thursday, 8 September 2011

ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ / Entha hadavitte hareyake

ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ 
ಅಟ್ಟಿ ಹಿಡಿದು ಮುಟ್ಟಿ ತಡೆದು ಗುಟ್ಟು ಸವೆಯಿತ್ತೇ.... ಗೆಳತಿ ||

ಅಪ್ಪನು ಬೆಳೆಸಿದ ಮಲ್ಲಿಗೆ ಚಪ್ಪರ ಹೂವನು ಚೆಲ್ಲಿತ್ತೆ 
ಅಮ್ಮನು ಬಡಿಸಿದ ಊಟದ ಸವಿಯು ಘಮ್ಮನೆ ಕಾಡಿತ್ತೆ
ಅಣ್ಣನ ಕೀಟಲೆ ತಮ್ಮನ ಕಾಟಕೆ ಬಣ್ಣದ ಬೆಳಕಿತ್ತೆ || ೧ ||

ನಲ್ಲನ ಕಣ್ಣಿನ ಸನ್ನೆಗೆ ಕವಿತೆಯ ಸುಳ್ಳಿನ ಸೊಬಗಿತ್ತೆ
ಮೆಲ್ಲನೆ ಉಸುರಿದ ಸೊಲ್ಲಿನ ರುಚಿಯು ಬೆಲ್ಲವ ಮೀರಿತ್ತೆ 
ಸುಳ್ಳೇ ನೆರಿಗೆಯ ಚಿಮ್ಮುವ ನಡಿಗೆಗೆ ಬಳ್ಳಿಯ ಬೆಡಗಿತ್ತೆ || ೨ ||

ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ
ಕಾಣದ ಕೈಯಿ ಎಲ್ಲ ಕದ್ದು ಉಳಿಯಿತು ನೆನಪಷ್ಟೇ ||

                                                               - ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟ

4 comments:

 1. ವಸು ಅವರೆ... ನೀವು ಹೇಳಿದಂತೆ ಅಂತರ್ಜಾಲದಲ್ಲಿ ಕೆಲವೊಮ್ಮೆ ನಮಗೆ ಬೇಕಾದದ್ದು ದೊರಕದೇ ಇದ್ದಾಗ ಈ ರೀತಿಯ ಒಂದು ಪ್ರಯತ್ನ ಮಾಡಬೇಕೆನಿಸುತ್ತದೆ...ಇಂದೇಕೋ ಬಹಳವಾಗಿ ಹಾಡನ್ನು ಕೇಳಬೇಕೆನಿಸಿದಾಗ ನಿಮ್ಮ ಬ್ಲಾಗ್ ಸಿಕ್ಕಿತು... ನಿಮ್ಮ ಪ್ರಯತ್ನ ಮುಂದುವರೆಯಲಿ..... ಶುಭ ಹಾರೈಕೆಗಳು.....

  ReplyDelete
 2. thumba danyavadagalu vasu avare......shubha haraikeyodane.,
  chethana.............

  ReplyDelete
 3. Good job.. Keep going.. Shubha harykegalu

  ReplyDelete
 4. thanks n hats off for ur efforts

  ReplyDelete