ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Friday 23 September 2011

ಅತ್ತಿತ್ತ ನೋಡದಿರು ಅತ್ತು ಹೊರಳಾಡದಿರು / Attitta nodadiru attu horalaadadiru

 ರಚನೆ : ಕೆ.ಎಸ್. ನರಸಿಂಹ ಸ್ವಾಮಿ

ಅತ್ತಿತ್ತ ನೋಡದಿರು, ಅತ್ತು ಹೊರಳಾಡದಿರು 
            ನಿದ್ದೆ ಬರುವಳು ಹೊದ್ದು ಮಲಗು, ಮಗುವೆ;
ಜೋ ಜೋಜೋ ಜೋ ಜೋ ಜೋಜೋ ಜೋ 
ಸುತ್ತಿ ಹೊರಳಾಡದಿರು, ಮತ್ತೆ ಹಠ ಹೂಡದಿರು.
            ನಿದ್ದೆ ಬರುವಳು ಕದ್ದು ಮಲಗು ಮಗುವೆ 
ಜೋ ಜೋಜೋ ಜೋ ಜೋ ಜೋಜೋ ಜೋ.

ಮಲಗು ಚೆಲ್ವಿನ ತೆರೆಯೆ, ಮಲಗು ಒಲ್ಮೆಯ ಸೆರೆಯೆ,
           ಮಲಗು ತೊಟ್ಟಿಲ ಸಿರಿಯೆ, ದೇವರಂತೆ; 
ಮಲಗು ಮುದ್ದಿನ ಗಿಣಿಯೆ, ಮಲಗು ಮುತ್ತಿನ ಮಣಿಯೆ,  
           ಮಲಗು ಚಂದಿರನೂರ ಹೋಗುವೆಯಂತೆ .

ತಾರೆಗಳ ಜರತಾರಿಯಂಗಿ ತೊಡಿಸುವರಂತೆ
           ಚಂದಿರನ ತಂಗಿಯರು ನಿನ್ನ ಕರೆದು;
ಹೂವ ಮುಡಿಸುವರಂತೆ, ಹಾಲ ಕುಡಿಸುವರಂತೆ,
          ವೀಣೆ ನುಡಿಸುವರಂತೆ ಸುತ್ತ ನೆರೆದು.   

ಬಣ್ಣ ಬಣ್ಣದ ಕನಸು ಕರಗುವುದು ಬಲುಬೇಗ;
          ಹಗಲು ಬರುವನು ಬೆಳ್ಳಿ ಮುಗಿಲ ನಡುವೆ 
ಚಿನ್ನದಂಬಾರಿಯಲಿ ನಿನ್ನ ಕಳುಹುವರಾಗ 
          ಪಟ್ಟದಾನೆಯ ಮೇಲೆ ಪುಟ್ಟ ಮಗುವೆ.

ಅತ್ತಿತ್ತ ನೋಡದಿರು ಅತ್ತು ಹೊರಳಾಡದಿರು 
          ನಿದ್ದೆ ಬರುವಳು ಹೊದ್ದು ಮಲಗು ಮಗುವೆ 
ಜೋ ಜೋಜೋ ಜೋ ಜೋ ಜೋಜೋ ಜೋ 
ಜೋ ಜೋಜೋ ಜೋ ಜೋ ಜೋಜೋ ಜೋ 

6 comments:

  1. This comment has been removed by the author.

    ReplyDelete
    Replies
    1. ಈ ಕಾಮೆಂಟನ್ನು ರಿಮೂವ್ ಮಾಡಿದ್ದಕ್ಕೆ ಕಾರಣ ಏನು. ಕಾಮೆಂಟ್ ಏನಿತ್ತು ತಿಳಿಸಬಹುದಾ

      Delete
    2. ಈ ಕಾಮೆಂಟನ್ನು ರಿಮೂವ್ ಮಾಡಿದ್ದಕ್ಕೆ ಕಾರಣ ಏನು. ಕಾಮೆಂಟ್ ಏನಿತ್ತು ತಿಳಿಸಬಹುದಾ

      Delete
  2. ಕೆ.ಎಸ್ ನರಸಿಂಹಸ್ವಾಮಿ ಅವರು ತುಂಬ ಸುಂದರವಾಗಿ ಈ ಸಾಹಿತ್ಯವನ್ನು ರಚಿಸಿದ್ದಾರೆ. ಇದನ್ನು ಇಲ್ಲಿ ಸೇರಿಸಿದವರಿಗೆ ಧನ್ಯವಾದಗಳು.

    ReplyDelete
  3. ಸೊಗಸಾದ ಜೋಗುಳದ ಹಾಡು .ಮಕ್ಕಳಿಗ್ಯಾಕೆ ,ಕೇಳುವ ಅಡಲ್ಟ್ಗಳಿಗೂ ನಿದ್ದೆ ಬರುತ್ತೆ .ಅಷ್ಟು ಪರಿಣಾಮಕಾರಿಯಾಗಿರುವ ಹಾಡಿದು .

    ReplyDelete