ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Saturday 28 July 2012

ಹಾವು ಅಂದ್ರೆ ಮರಿ ಗುಬ್ಬಿಗೆ / Haavu andre marigubbige...

ಹಾವು ಅಂದ್ರೆ ಮರಿ ಗುಬ್ಬಿಗೆ ಭಾರಿ ದಿಗಿಲೇನೆ.
ನೆನಿಸಿಕೊಂದ್ರೆ ಮೈ ನಡುಗುತ್ತೆ ಹಾಡೇ ಹಗಲೇನೆ.
ಒಂದು ಸಾರಿ ಪುಟಾಣಿ ಗುಬ್ಬಿ ಅಮ್ಮನ ಕೇಳುತ್ತೆ,
ಅಮ್ಮ ಅಮ್ಮ ಬುಸ್ಸ್ ಬುಸ್ಸ್ ಹಾವು ಹ್ಯಾಗಿರತ್ತೆ?

ಕೊಕ್ಕಲಿ ಬೆನ್ನು ತಿಕ್ಕಿ ಕೊಳ್ತಾ ಅಮ್ಮ ಅನ್ನುತ್ತೆ,
ಒಳ್ಳೆ ಪ್ರಶ್ನೆ ಹಾವು-ಹ್ಯಾಗಿರತ್ತೆ ಹಾವು ಹ್ಯಾಗಿರತ್ತೆ.
ಹಾವಿರತ್ತೆ ಹಾವಿನ ಹಾಗೆ ಕಾಗೆ ಕಪ್ಪಗೆ,
ಸಪೂರ ಥಳ ಥಳ ಕೆಂಡದ ಕಣ್ಣು ಕಡ್ಡಿ ದಪ್ಪಗೆ.

ಸೂರಿಗೆ ಸುತ್ತಿ ಜೋತಾಡತ್ತೆ ಗೋಧಿ ಬೆನ್ನು
ದೀಪದ ಹಾಗೆ ಉರಿತಿರತ್ತೆ ಹಾವಿನ ಕಣ್ಣು
ಬುಸ್ಸ್ ಎನ್ನುತ್ತೆ ದರಿದ್ರ ಹಾವಿಗೆ ತುಂಬದ ಹೊಟ್ಟೆ
ಇಡಿ ಇಡಿಯಾಗಿ ನುಂಗ್ ಬಿಡುತ್ತೆ ಹಕ್ಕಿ ಮೊಟ್ಟೆ.

ಹಕ್ಕಿಯ ಮೊಟ್ಟೆ ನುಂಗಿದ್ ಮೇಲೆ ಇಡಿ ಇಡೀಲಿ
ಹಕ್ಕಿ ಮರಿ ಬೆಳ್ಕೊಳ್ಳತ್ತೆ ಹಾವಿನ ಹೊಟ್ಟೆಲಿ
ಹಕ್ಕಿ ಮರಿ ಹುಟ್ಕೋಳ್ಳತ್ತೆ ಹಾವಿನ ಹೊಟ್ಟೆಲಿ
ಅಂತ ಪುಟಾಣಿ ಕುಣಿದಾಡ್ತಿತ್ತು ಅಮ್ಮನ ತೋಳಲ್ಲಿ

ನಿಟ್ಟುಸಿರಿಟ್ಟು ಅಮ್ಮ ಗುಬ್ಬಿ ಇಲ್ಲ ಬಂಗಾರ
ಇನ್ನೂ ನಿನಗೆ ತಿಳೀದಮ್ಮ ಹಾವಿನ ಹುನ್ನಾರ
ಹಾವಿನ ಹೊಟ್ಟೆ ಸೇರಿದ್ ಮೇಲೆ ಹೇಳೋದ್ ಇನ್ನೇನು
ಹಾವಿನ ಮೊಟ್ಟೆ ಆಗ್ಬಿಡತ್ತೆ ಹಕ್ಕಿ ಮೊಟ್ಟೇನು.

* ರಚನೆ ಯಾರದೆಂದು ತಿಳಿದಿಲ್ಲ.

1 comment:

  1. Thanks for putting the lyrics. I remember seeing the dance on DD-Kannada as child!!

    ReplyDelete