ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.
Monday, 31 December 2012

ನದನದಿಗಳ ಗಿರಿವನಗಳ ತಾಯೆ / Nadanadigala girivanagala taaye

ನದನದಿಗಳ ಗಿರಿವನಗಳ ತಾಯೆ ಭರತಮಾತೆ
ಓಂಕಾರದ ಝಂಕಾರದ ನಿನಗಿದೋ ಶುಭಗೀತೆ

ಹಿಮಚು೦ಬಿತ ಶಿಖರದಲ್ಲಿ ತಾಯೆ ನಿನ್ನ ನೆಲಸು
ಬಿರುಗಾಳಿಯ ಭಿತ್ತಿಯಿಂದ ನೀ ಎಮ್ಮನು ಹರಸು

ಗಂಗೆಯಮುನೆ ಸಂಗಮದಲಿ ನಿನ್ನ ವೇದಘೋಷ
ದೇವದಾರು ವನಗಳಲ್ಲಿ ನಿನ್ನ ಮಂದಹಾಸ

ವಿಂಧ್ಯಾಚಲ ಗೀತೆಯಲ್ಲಿ ಸಂಧ್ಯಾರುಣ ಛಾಯೆ
ಕಾವೇರಿಯ ತೆರೆಗಳಲ್ಲಿ ಮೀನಾಕ್ಷಿಯ ಮಾಯೆ

ಪರ್ವತಗಳ ಶಿಖರದಿಂದ ಕಡಲಂಚಿನ ತನಕ
ತಾಯೆ ನಿನ್ನ ಮುಕುಟದಿಂದ ಹೊಳೆಯಲಿ ಮಣಿಕನಕ.

                                                                       - ಕೆ. ಎಸ್. ನರಸಿಂಹ ಸ್ವಾಮಿ 

Download this song

1 comment:

  1. ಅಡಿಗರ ಕವಿತೆಯ ಪೂರ್ಣ ಪಾಠ ಹುಡುಕಿದಾಗ ಕಂಡದ್ದು
    ನಿಮ್ಮ ಬ್ಲಾಗು. ಅಬ್ಬಾ ಎಷ್ಟು ಚಂದದ ಸಂಗ್ರಹ.
    ಮುಂದುವರೆಸಿ , ಬರೆಯುತ್ತಿರಿ
    ಈ ಸಂಗ್ರಹಕ್ಕಾಗಿ ಧನ್ಯವಾದಗಳು

    ReplyDelete