೧
ಭೂಮಿತಾಯಿಯಾ
ಚೊಚ್ಚಿಲ ಮಗನನು
ಕಣ್ತೆರೆದೊಮ್ಮೆ
ನೋಡಿಹಿರೇನು?
ಚೊಚ್ಚಿಲ ಮಗನನು
ಕಣ್ತೆರೆದೊಮ್ಮೆ
ನೋಡಿಹಿರೇನು?
೨
ಮುಗಿಲೆಂಬುವದು
ಕಿಸಿದಿತು ಹಲ್ಲು!
ಬಂದಾ ಬೆಳೆಯು
ಮಿಡಿಚಿಯ ಮೇವು;
ಬಿತ್ತಿದ್ದಾಯಿತು
ಉತ್ತಿಹ ಮಣ್ಣು!
ದಿನವೂ ಸಂಜೆಗೆ
ಬೆವರಿನ ಜಳಕ,
ಉಸಿರಿನ ಕೂಳಿಗೆ
ಕಂಬನಿ ನೀರು!
ಹೊಟ್ಟೆಯು ಹತ್ತಿತು
ಬೆನ್ನಿನ ಬೆನ್ನು!
ಎದೆಯ ಗೂಡಿನೊಳು
ಚಿಂತೆಯ ಗೂಗಿ!
ಮಿದುಳಿನ ಮೂಲೆಗೆ
ಲೊಟ ಲೊಟ ಹಲ್ಲಿ!
ಮೋರೆಯು ಸಾವನು
ಅಣಕಿಸುತಿಹುದು!
ಕೊರಳಿಗೆ ಹತ್ತಿದೆ
ಸಾಲದ ಶೂಲ!
ಆದರು ಬರದೊ
ಯಮನಿಗೆ ಕರುಣ
ಮುಗಿಲೆಂಬುವದು
ಕಿಸಿದಿತು ಹಲ್ಲು!
ಬಂದಾ ಬೆಳೆಯು
ಮಿಡಿಚಿಯ ಮೇವು;
ಬಿತ್ತಿದ್ದಾಯಿತು
ಉತ್ತಿಹ ಮಣ್ಣು!
ದಿನವೂ ಸಂಜೆಗೆ
ಬೆವರಿನ ಜಳಕ,
ಉಸಿರಿನ ಕೂಳಿಗೆ
ಕಂಬನಿ ನೀರು!
ಹೊಟ್ಟೆಯು ಹತ್ತಿತು
ಬೆನ್ನಿನ ಬೆನ್ನು!
ಎದೆಯ ಗೂಡಿನೊಳು
ಚಿಂತೆಯ ಗೂಗಿ!
ಮಿದುಳಿನ ಮೂಲೆಗೆ
ಲೊಟ ಲೊಟ ಹಲ್ಲಿ!
ಮೋರೆಯು ಸಾವನು
ಅಣಕಿಸುತಿಹುದು!
ಕೊರಳಿಗೆ ಹತ್ತಿದೆ
ಸಾಲದ ಶೂಲ!
ಆದರು ಬರದೊ
ಯಮನಿಗೆ ಕರುಣ
ಉಸಿರಿಗೆ ಒಮ್ಮೆ
ಜನನಾ ಮರಣಾ.
ಜನನಾ ಮರಣಾ.
೩
ನರಗಳ ನೂಲಿನ
ಪರೆ ಪರೆ ಚೀಲಾ
ತೆರೆ ತೆರೆಯಾಗಿದೆ
ಜಿರಿಜಿರಿಯಾಗಿದೆ;
ಅದರೊಳಗೊಂದು
ಎಲುಬಿನ ಬಲೆಯು!
ಟುಕು ಟುಕು ಡುಗು ಡುಗು
ಉಲಿಯುವ ನರಳುವ
ಜೀವದ ಜಂತುವು
ಹೊರಳುತ ಉರುಳುತ;
ಜನುಮವೆಂಬುವಾ
ಕತ್ತಲೆಯಲ್ಲಿ
ಬಿದ್ದಿದೆ ಒಳಗೆ
ಹೇಗೋ ಬಂದು!
ಸಾವಿನ ಬೆಳಕದು
ಕಾಣುವದೆಂದು?
ಎಂದೋ ಎಂದು
ಕನವರಿಸುವದು
ತಳಮಳಿಸುವದು!
- ಅಂಬಿಕಾತನಯ ದತ್ತ
ನರಗಳ ನೂಲಿನ
ಪರೆ ಪರೆ ಚೀಲಾ
ತೆರೆ ತೆರೆಯಾಗಿದೆ
ಜಿರಿಜಿರಿಯಾಗಿದೆ;
ಅದರೊಳಗೊಂದು
ಎಲುಬಿನ ಬಲೆಯು!
ಟುಕು ಟುಕು ಡುಗು ಡುಗು
ಉಲಿಯುವ ನರಳುವ
ಜೀವದ ಜಂತುವು
ಹೊರಳುತ ಉರುಳುತ;
ಜನುಮವೆಂಬುವಾ
ಕತ್ತಲೆಯಲ್ಲಿ
ಬಿದ್ದಿದೆ ಒಳಗೆ
ಹೇಗೋ ಬಂದು!
ಸಾವಿನ ಬೆಳಕದು
ಕಾಣುವದೆಂದು?
ಎಂದೋ ಎಂದು
ಕನವರಿಸುವದು
ತಳಮಳಿಸುವದು!
- ಅಂಬಿಕಾತನಯ ದತ್ತ
*ಬೇಂದ್ರೆಯವರ "ನಾದಲೀಲೆ" ಕವನ ಸಂಕಲನದ ಕವನ. ಕವಿತೆಯದೇ ಹೆಸರಿನಲ್ಲಿ ಮೂಡಿಬಂದ ಚಲನಚಿತ್ರದಲ್ಲಿ ಬಳಕೆಯಾಗಿದೆ. ಗೀತೆ ನನ್ನ ಬಳಿ ಇಲ್ಲ. ಇದ್ದವರು ಕಳುಹಿಸಿದರೆ ಇಲ್ಲಿ ಜೋಡಿಸುವೆ - ವಸು