ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.
Thursday, 24 October 2013

ನಿನ್ನ ಕಂಗಳ ಕೊಳದಿ / Ninna Kangala Koladi

ನಿನ್ನ ಕಂಗಳ ಕೊಳದಿ ಬೆಳದಿಂಗಳಿಳಿದಂತೆ
ನನ್ನೆದೆಯ ಕಡಲೇಕೆ ಬೀಗುತಿಹುದು?
ಸೂಜಿಗಲ್ಲಾಗಿರುವೆ ಸೆಳೆದು ನಿನ್ನಯ ಕಡೆಗೆ
ಗರಿಗೆದರಿ ಕನಸುಗಳು ಕಾಡುತಿಹುದು.

ಎದೆಗೆ ತಾಪದ ಉಸಿರು
ತೀಡಿ ತರುತಿದೆ ಅಲರು
ನಿನ್ನ ಹುಣ್ಣಿಮೆ ನಗೆಯು ಛೇಡಿಸಿಹುದು
ಬಳಿಗೆ ಬಾರದೆ ನಿಂತೆ
ಹೃದಯ ತುಂಬಿದೆ ಚಿಂತೆ
ಜೀವ ನಿನ್ನಾಸರೆಗೆ ಕಾಯುತಿಹುದು.

ನಾನೊಂದು ದಡದಲ್ಲಿ
ನೀನೊಂದು ದಡದಲ್ಲಿ
ನಡುವೆ ಮೈಚಾಚಿರುವ ವಿರಹದಳಲು
ಯಾವ ದೋಣಿಯು ತೇಲಿ
ಎಂದು ಬರುವುದೋ ಕಾಣೆ
ನೀನಿರುವ ಬಳಿಯಲ್ಲಿ ನನ್ನ ಬಿಡಲು

                                        - ಎಮ್. ಎನ್. ವ್ಯಾಸ ರಾವ್

Download This Song

4 comments:

 1. nanage "kaarirulige komalatheya_______chandrama, indeko modadaache mareyaagiruvaa" annuva bhavageethe bekitthu........thammalliddare kodalu sadyave?

  ReplyDelete
 2. ನಾನೊಂದು ದಡದಲ್ಲಿ
  ನೀನೊಂದು ದಡದಲ್ಲಿ
  ನಡುವೆ ಮೈಚಾಚಿರುವ ವಿರಹದಳಲು
  ಯಾವ ದೋಣಿಯು ತೇಲಿ
  ಎಂದು ಬರುವುದೋ ಕಾಣೆ
  ನೀನಿರುವ ಬಳಿಯಲ್ಲಿ ನನ್ನ ಬಿಡಲು ........ಈ ಸಾಲುಗಳು ನನಗಿಷ್ಟವಾದವು......

  ReplyDelete
 3. "ವಸು" ಅವರೆ.. ನಿಮ್ಮ ಕನ್ನಡ ಸಾಹಿತ್ಯ ಪ್ರೀತಿಗೆ ನನ್ನ ಹೃದಯಪೂರ್ವಕ ನಮನ...

  ReplyDelete
 4. ಅದ್ಭುತವಾದ ಸಾಹಿತ್ಯ, ರತ್ನಮಾಲಾ ಅವರ ಕಂಠಸಿರಿಯಲ್ಲಿ ಕೇಳಿದರೆ ಜೀವನ ಪಾವನ.

  ReplyDelete