ರಚನೆ; ಕೆ. ಸ್. ನಿಸಾರ್ ಅಹಮದ್
- ೧ -
ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ,
ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ,
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ, ನಿನಗೆ......
- ೨ -
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ,
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ,
ಓಲೆಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ, ನಿನಗೆ......
- ೩ -
ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ,
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ, ನಿನಗೆ......
೧)ಹಲವೆನ್ನದ ಹಿರಿಮೆಯೆ,
ReplyDelete೨)ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ಈ ಎರಡು ಸಾಲಿನ ಅರ್ಥ ತಿಳಿಸುವಿರಾ?