ರಚನೆ; ಕೆ. ಸ್. ನರಸಿಂಹ ಸ್ವಾಮಿ
ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನೊಳಿದೆ ನನ್ನ ಮನಸು .
ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ನಿನ್ನೊಲುಮೆ ನನ್ನ ಕಂಡು.
ಸಾಗರನ ಹೃದಯದಲಿ ರತ್ನಪರ್ವತ ಮಾಲೆ
ಮಿಂಚಿನಲಿ ಮೀವುದಂತೆ.
ತೀರದಲಿ ಬಳಕುವಲೆ ಕಣ್ಣ ಚುಂಬಿಸಿ ಮತ್ತೆ
ಸಾಗುವುದು ಕನಸಿನಂತೆ.
ಅಲೆ ಬಂದು ಕರೆಯುವುದು ನಿನ್ನೊಲುಮೆಯರಮನೆಗೆ
ಒಳಗಡಲ ರತ್ನಪುರಿಗೆ.
ಅಲೆಯಿಡುವ ಮುತ್ತಿನಲೆ ಕಾಣುವುದು ನಿನ್ನೊಲುಮೆ-
ಯೊಳಗುಡಿಯ ಮೂರ್ತಿಮಹಿಮೆ.
ನಿನ್ನ ಪ್ರೇಮದ ಪರಿಯ ನಾನರಿಯೆ, ಕನಕಾಂಗಿ
ತಾರೆಯಾಗದೆ ಕಾಣುವೀ ಮಿಂಚು, ನಾಳೆ, ಅರ್ಧಾಂಗಿ ?
No comments:
Post a Comment