ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ
ಅಟ್ಟಿ ಹಿಡಿದು ಮುಟ್ಟಿ ತಡೆದು ಗುಟ್ಟು ಸವೆಯಿತ್ತೇ.... ಗೆಳತಿ ||
ಅಪ್ಪನು ಬೆಳೆಸಿದ ಮಲ್ಲಿಗೆ ಚಪ್ಪರ ಹೂವನು ಚೆಲ್ಲಿತ್ತೆ
ಅಮ್ಮನು ಬಡಿಸಿದ ಊಟದ ಸವಿಯು ಘಮ್ಮನೆ ಕಾಡಿತ್ತೆ
ಅಣ್ಣನ ಕೀಟಲೆ ತಮ್ಮನ ಕಾಟಕೆ ಬಣ್ಣದ ಬೆಳಕಿತ್ತೆ || ೧ ||
ನಲ್ಲನ ಕಣ್ಣಿನ ಸನ್ನೆಗೆ ಕವಿತೆಯ ಸುಳ್ಳಿನ ಸೊಬಗಿತ್ತೆ
ಮೆಲ್ಲನೆ ಉಸುರಿದ ಸೊಲ್ಲಿನ ರುಚಿಯು ಬೆಲ್ಲವ ಮೀರಿತ್ತೆ
ಸುಳ್ಳೇ ನೆರಿಗೆಯ ಚಿಮ್ಮುವ ನಡಿಗೆಗೆ ಬಳ್ಳಿಯ ಬೆಡಗಿತ್ತೆ || ೨ ||
ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ
ಕಾಣದ ಕೈಯಿ ಎಲ್ಲ ಕದ್ದು ಉಳಿಯಿತು ನೆನಪಷ್ಟೇ ||
- ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟ
- ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟ
ವಸು ಅವರೆ... ನೀವು ಹೇಳಿದಂತೆ ಅಂತರ್ಜಾಲದಲ್ಲಿ ಕೆಲವೊಮ್ಮೆ ನಮಗೆ ಬೇಕಾದದ್ದು ದೊರಕದೇ ಇದ್ದಾಗ ಈ ರೀತಿಯ ಒಂದು ಪ್ರಯತ್ನ ಮಾಡಬೇಕೆನಿಸುತ್ತದೆ...ಇಂದೇಕೋ ಬಹಳವಾಗಿ ಹಾಡನ್ನು ಕೇಳಬೇಕೆನಿಸಿದಾಗ ನಿಮ್ಮ ಬ್ಲಾಗ್ ಸಿಕ್ಕಿತು... ನಿಮ್ಮ ಪ್ರಯತ್ನ ಮುಂದುವರೆಯಲಿ..... ಶುಭ ಹಾರೈಕೆಗಳು.....
ReplyDeletethumba danyavadagalu vasu avare......shubha haraikeyodane.,
ReplyDeletechethana.............
Good job.. Keep going.. Shubha harykegalu
ReplyDeletethanks n hats off for ur efforts
ReplyDelete