ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Monday, 3 October 2011

ಎದೆತುಂಬಿ ಹಾಡಿದೆನು / Ede Tumbi Haadidenu

ಎದೆತುಂಬಿ ಹಾಡಿದೆನು ಅಂದು ನಾನು,
ಮನವಿಟ್ಟು ಕೇಳಿದಿರಿ ಅಲ್ಲಿ ನೀವು

ಇಂದು ನಾ ಹಾಡಿದರು ಅಂದಿನಂತೆಯೆ ಕುಳಿತು 
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ.
ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ?

ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ,
ಕೇಳುವವರಿಹರೆಂದು ನಾ ಬಲ್ಲೆನದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ.  

                                             - ಡಾ. ಜಿ.ಎಸ್. ಶಿವರುದ್ರಪ್ಪ

2 comments:

  1. ವಸು ನಿನ್ನ ಬಗ್ಗೆ ಅದು ತುಸು ಆಗಲಿಲ್ವಾ?

    ReplyDelete
  2. Vasu.ನೀವು ತುಂಬಾ ಒಳ್ಳೆಯ ಭಾವಗೀತೆಗಳ ಸಂಗ್ರಹಣೆ ಮಾಡಿದ್ದೀರಾ.....,...👌👌👌👌👌

    ReplyDelete