ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ
ಜೊನ್ನ ಜೇನಿಗೆ ಬಾಯಾರಿದೆ ಚಕೋರ ಚುಂಬನ
ಚಂದ್ರಿಕಾಮಧುಪಾನಮತ್ತ
ಪೀನಕುಂಭಪಯೋಧವಿತ್ತ
ವಕ್ಷಪರಿಲಂಭನ ನಿಮಿತ್ತ ನಿರಾವಲಂಬನ
ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ
ಚರಣನೂಪುರಕಿಂಕಿಣಿಕೊಳ
ಮದನಸಿಂಜಿನಿ ಜನಿತ ನಿಹ್ವಳ
ಚಿತ್ತ ರಂಜನಿ ತಳುವದೀಕ್ಷಣ
ಚಂದ್ರ ಮಂಚಕೆ ಬಾ ಚಕೋರಿ
ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ
ತೆರೆಯ ಚಿಮ್ಮಿಸಿ ನೊರೆಯ ಹೊಮ್ಮಿಸಿ
ಕ್ಷೀರಸಾಗರದಲ್ಲಿ ತೇಲುವ
ಬಾಗುಚಂದ್ರನ ತೂಗುಮಂಚಕೆ
ಬಾ ಚಕೋರಿ ಬಾ ಚಕೋರಿ ಎದೆ ಹಾರಿದೆ
ಬಾಯಾರಿದೆ ಚಕೋರ ಚುಂಬನ
ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ
ನಿಕುಂಜ ರತಿವನ ಮದನ ಯಾಗಕೆ
ಅನಂಗರಕ್ತಿಯ ಬಿಂಬ ಭೋಗಕೆ
ಕಾಂಕ್ಷಿಯಾಗಿದೆ ನಗ್ನ ಯೋಗಕೆ
ಇಕ್ಷು ಮಂಚದ ಸಾಗ್ನಿ ಪಕ್ಷಿಯ ಅಚಂಚು ಚುಂಬನ
ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ
- ಕುವೆಂಪು
ನನ್ನ ಪ್ರಯತ್ನಕ್ಕೆ ದಕ್ಕಿದ ಮೊದಲ ಪ್ರೋತ್ಸಾಹದ ನುಡಿಗಳಿವು. ಧನ್ಯವಾದಗಳು.
ReplyDeleteವಸು
ee haadu kelabahude
ReplyDeleteತುಂಬ ಒಳ್ಳೆಯ ಕೆಲಸ ಮಾಡುತ್ತ ಇದ್ದಿರ ವಸು ಅವರೇ ... ನಿಮಗೆ ತುಂಬ ಧನ್ಯವಾದಗಳು
ReplyDeleteTumba Dhanyavaadagalu.
ReplyDeletecan anyone give meaning of this in english?
ReplyDelete