ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Tuesday, 4 October 2011

ಯಾರಿಗುಂಟು ಯಾರಿಗಿಲ್ಲ ಬಾಳೆಲ್ಲ ಬೇವು ಬೆಲ್ಲ / Yariguntu Yarigilla Balella bevu bella

ಯಾರಿಗುಂಟು ಯಾರಿಗಿಲ್ಲ ಬಾಳೆಲ್ಲ ಬೇವು ಬೆಲ್ಲ
ಬಂದದ್ದೆಲ್ಲ ಈಸ ಬೇಕಯ್ಯ ಗೆಣೆಯ,
ಕಾಣದ್ದಕ್ಕೆ ಚಿಂತೆ ಯಾಕಯ್ಯ,
ಗೋಣು ಹಾಕಿ ಕೂಡ ಬ್ಯಾಡ, ಗತ್ತಿನಾಗೆ ಬಾಳ ನೋಡ.

ಏಳು ಬೀಳು ಇರುವುದೇನೆ ಇಲ್ಲಿ ಹುಟ್ಟಿ ಬಂದ ಮೇಲೆ
ಸುಖ ದುಃಖ ಕಾಡೋದೇನೆ ಉಪ್ಪುಖಾರ ತಿಂದ ಮೇಲೆ 
ಕಷ್ಟ ಮೆಟ್ಟಿ ಸಾಗ ಬೇಕಯ್ಯ ಓ ಗೆಣೆಯ 
ಕೈಯ ಚೆಲ್ಲಿ ಕೊರಗ ಬೇಡಯ್ಯ
ಗೋಣು ಹಾಕಿ ಕೂಡ ಬ್ಯಾಡ, ಗತ್ತಿನಾಗೆ ಬಾಳ ನೋಡ.

ಪ್ರೀತಿಪ್ರೇಮ ನಡೆದ ಮೇಲೆ ತಪ್ಪೋದಿಲ್ಲ ರಾಸಲೀಲೆ
ಕದ್ದುಮುಚ್ಚಿ ನಡೆಯೋ ವೇಳೆ ಮನಸಿನಲ್ಲಿ ತೂಗುಯ್ಯಾಲೆ
ಒಳಗೆ ಹೊರಗೆ ಯಾಕೆ ಬೇಕಯ್ಯ ಓ ಗೆಣೆಯ
ಕಣ್ಣು ತೆರೆದು ಲೋಕ ನೋಡಯ್ಯ
ಗೋಣು ಹಾಕಿ ಕೂಡ ಬ್ಯಾಡ, ಗತ್ತಿನಾಗೆ ಬಾಳ ನೋಡ.


                                                                - ಪ್ರೊ. ದೊಡ್ಡರಂಗೇ ಗೌಡ 

3 comments:

  1. ಪ್ರೊ.ದೊಡ್ಡರಂಗೇ ಗೌಡರಲ್ವಾ ಬರ್ದಿದ್ದು ಇದನ್ನ?

    ReplyDelete
    Replies
    1. ಹೌದು. ಈ ಹಾಡಿಗೆ ಕರ್ತೃವಿನ ಹೆಸರು ಬರೆದಿದ್ದೇನೆ ಅಂದುಕೊಂಡಿದ್ದೆ. ಬರೆದಿರಲಿಲ್ಲ ಅನ್ನುವುದನ್ನು ಗಮನಿಸಿಯೇ ಇರಲಿಲ್ಲ. Once again Thank you. - ವಸು.

      Delete
  2. ಧನ್ಯವಾದಗಳು

    ReplyDelete