ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Friday, 24 February 2012

ಎಲ್ಲೋ ಹುಡುಕಿದೆ ಇಲ್ಲದ ದೇವರ / ello hudukide illada devara

ಎಲ್ಲೋ ಹುಡುಕಿದೆ ಇಲ್ಲದ ದೇವರ
ಕಲ್ಲು ಮಣ್ಣುಗಳ ಗುಡಿಯೊಳಗೆ
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಗುರುತಿಸದಾದೆನು ನಮ್ಮೊಳಗೆ ||

ಎಲ್ಲಿದೆ ನಂದನ, ಎಲ್ಲಿದೆ ಬಂಧನ
ಎಲ್ಲಾ ಇದೆ ಈ ನಮ್ಮೊಳಗೆ
ಒಳಗಿನ ತಿಳಿಯನು ಕಲಕದೆ ಇದ್ದರೆ
ಅಮೃತದ ಸವಿಯಿದೆ ನಾಲಿಗೆಗೆ ||

ಹತ್ತಿರವಿದ್ದೂ ದೂರ ನಿಲ್ಲುವೆವು
ನಮ್ಮ ಅಹಮ್ಮಿನ ಕೋಟೆಯಲಿ
ಎಷ್ಟು ಕಷ್ಟವೋ ಹೊಂದಿಕೆಯೆಂಬುದು
ನಾಲ್ಕುದಿನದ ಈ ಬದುಕಿನಲಿ ||

                                        - ಜಿ. ಎಸ್. ಶಿವರುದ್ರಪ್ಪ          

14 comments:

  1. God Bless. thank you. One of the most convenient sites and very reliable.

    ReplyDelete
  2. we know truth but we cant change

    ReplyDelete
  3. thank you for writing meaning full poems

    ReplyDelete
  4. Really very much meaningful and heart touching song with c Ashwath voice

    ReplyDelete
  5. ಸಾಹಿತ್ಯಕ್ಕಾಗಿ ತುಂಬು ಹೃದಯದ ಧನ್ಯವಾದಗಳು ಸರ್. ಒಂದು ಸಣ್ಣ ತಿದ್ದುಪಡಿ ಇದೆ ಸರ್.
    ಗುರುತಿಸದಾದೆನು ನಿಮ್ಮೊಳಗೆ ಅಂತ ಇದೆ
    ಗುರುತಿಸದಾದೆನು ನಮ್ಮೊಳಗೆ ಅಂತ ಒಂದು ಸಣ್ಣ ತಿದ್ದುಪಡಿ ಸರ್.

    ಸಾಹಿತ್ಯಕ್ಕಾಗಿ ಮತ್ತೊಮ್ಮೆ ಧನ್ಯವಾದಗಳು.

    ReplyDelete
  6. Thank you dr G's shivarudrappa sir to giving us such beautiful poem to us

    ReplyDelete
  7. Can we also have english translations please.

    ReplyDelete
  8. ನಿಮಗೂ ಹಾಗೆ ನಿಮ್ಮ ಪ್ರಯತ್ನಕ್ಕೂ ಯಶಸ್ಸು ಸಿಗಲಿ

    ReplyDelete
  9. ONE SONG CAN MAKE SO MANY CHANGES.......

    ReplyDelete