ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Monday, 23 July 2012

ನೂರು ದೇವರನೆಲ್ಲ ನೂಕಾಚೆ ದೂರ / Nooru devaranella nookache doora...

ನೂರು ದೇವರನೆಲ್ಲ ನೂಕಾಚೆ ದೂರ
ಭಾರತಾಂಬೆಯೇ ದೇವಿ ನಮಗಿಂದು
ಪೂಜಿಸುವ ಬಾರಾ ಬಾರಾ....

ಶತಮಾನಗಳು ಬರಿಯ ಜಡಶಿಲೆಯ ಪೂಜಿಸಾಯ್ತು
ಹಾವುಗಳಿಗೆ ಹಾಲೆರೆದು ಪೋಷಿಸಾಯ್ತು
ಬಿಸಿಲು ಮಳೆ ಗಾಳಿ ಬೆಂಕಿಯನೆಲ್ಲ ಬೇಡಿಯಾಯ್ತು
ದಾಸರನು ಪೂಜಿಸಿಯೇ ದಾಸ್ಯವಾಯ್ತು.
                                                              ಭಾರತಾಂಬೆಯೇ ದೇವಿ....

ಗುಡಿಯೊಳಗೆ ಕಣ್ಮುಚ್ಚಿ ಬೆಚ್ಚಗಿರುವರನೆಲ್ಲ
ಭಕ್ತ ರಕ್ತವ ಹೀರಿ ಕೊಬ್ಬಿಹರನೆಲ್ಲ
ಘಂಟೆ ಜಾಗಟೆಗಳಿಂ ಬಡಿದು ಕುತ್ತಿಗೆ ಹಿಡಿದು
ಕಡಲಡಿಗೆ ತಳ್ಳಿರೈ ಶಂಖದಿಂ ನುಡಿದು.
                                                              ಭಾರತಾಂಬೆಯೇ ದೇವಿ....

ಸತ್ತ ಕಲ್ಗಳ ಮುಂದೆ ಅತ್ತು ಕರೆದುದು ಸಾಕು
ಜೀವದಾತೆಯನಿಂದು ಕೂಗಬೇಕು
ಶಿಲೆಯ ಮೂರ್ತಿಗೆ ನೇಯ್ದ ಕಲೆಯ ಬಲೆಯನು ಒಯ್ದು
ಚಳಿಯು ಮಳೆಯಲಿ ನವೆವ ತಾಯ್ಗೆ ಹಾಕು.
                                                              ಭಾರತಾಂಬೆಯೇ ದೇವಿ....

                                                                                                  - ಕುವೆಂಪು 

3 comments:

  1. modalige:nimma bio tumba ishtavaytu (nimma poorna hesaru vasundhara irabahudu)
    idondu tumba olleya prayatna ,,nimma ee prayatnakke nanna kadeyinda ido nooru namana...

    ReplyDelete
  2. ಕುವೆಂಪುರವರಿಗೆ ಕುವೆಂಪು ಸರಿಸಾಟಿ.
    ಈ ಕವಿತೆ ಓದಿ ಈಗಲಾದರೂ ಹಿಂದಿತ್ವದಿಂದ ಹೊರಬನ್ನಿ. ಹಿಂದುತ್ವ ಎಂಬ ರಾಕ್ಷಸ ಕೊಲ್ಲಬನ್ನಿ.

    ReplyDelete
  3. This comment has been removed by the author.

    ReplyDelete