ಯಾಕೋ ಕಾಣೆ ರುದ್ರ ವೀಣೆ
ಮಿಡಿಯುತಿರುವುದು
ಜೀವದಾಣೆಯಂತೆ ತಾನೆ
ನುಡಿಯುತಿರುವುದು.
ತಂತಿ ಮಿಂಚಿ ನಡುಗುತಿದೆ
ಸೊಲ್ಲು ಸಿಡಿದು ಗುಡುಗುತಿದೆ
ಮಿಡಿದ ಬೆರಳು ಅಡಗುತಿದೆ
ಮುಗಿಲ ಬಯಲಲಿ.
ಚಿಕ್ಕೆ ಬಾಲ ಬೀಸುತಿವೆ
ಸೂರ್ಯಚಂದ್ರ ಈಸುತಿವೆ
ಹೊಸ ಬೆಳಕನೆ ಹಾಸುತಿವೆ
ಕಾಲ ಪಥದಲಿ.
ಧರ್ಮಾಸನ ಹೊರಳುತಿವೆ
ಸಿಂಹಾಸನ ಉರುಳುತಿವೆ
ಜಾತಿ ಪಂಥ ತೆರಳುತಿವೆ
ಮನದ ಮರೆಯಲಿ.
ನೆಲದ ಬಸಿರೊಳುರಿಯುತಿದೆ
ಬೆಟ್ಟದೆದೆಯು ಬಿರಿಯುತಿದೆ
ನೀರು ಮೀರಿ ಹರಿಯುತಿದೆ
ಕೆಂಪು ನೆಲದಲಿ.
-ಅಂಬಿಕಾತನಯ ದತ್ತ
ಮಿಡಿಯುತಿರುವುದು
ಜೀವದಾಣೆಯಂತೆ ತಾನೆ
ನುಡಿಯುತಿರುವುದು.
ತಂತಿ ಮಿಂಚಿ ನಡುಗುತಿದೆ
ಸೊಲ್ಲು ಸಿಡಿದು ಗುಡುಗುತಿದೆ
ಮಿಡಿದ ಬೆರಳು ಅಡಗುತಿದೆ
ಮುಗಿಲ ಬಯಲಲಿ.
ಚಿಕ್ಕೆ ಬಾಲ ಬೀಸುತಿವೆ
ಸೂರ್ಯಚಂದ್ರ ಈಸುತಿವೆ
ಹೊಸ ಬೆಳಕನೆ ಹಾಸುತಿವೆ
ಕಾಲ ಪಥದಲಿ.
ಧರ್ಮಾಸನ ಹೊರಳುತಿವೆ
ಸಿಂಹಾಸನ ಉರುಳುತಿವೆ
ಜಾತಿ ಪಂಥ ತೆರಳುತಿವೆ
ಮನದ ಮರೆಯಲಿ.
ನೆಲದ ಬಸಿರೊಳುರಿಯುತಿದೆ
ಬೆಟ್ಟದೆದೆಯು ಬಿರಿಯುತಿದೆ
ನೀರು ಮೀರಿ ಹರಿಯುತಿದೆ
ಕೆಂಪು ನೆಲದಲಿ.
-ಅಂಬಿಕಾತನಯ ದತ್ತ
ಅದ್ಭುತವಾದ ಕವಿತೆ
ReplyDeleteವಸು ಅವರೇ ನಿಮ್ಮ ಪರಿಚಯ ಖುಷಿ ನೀಡಿತು.
ReplyDelete"ವಸು" ಅವರೆ.. ನಿಮ್ಮ ಕನ್ನಡ ಸಾಹಿತ್ಯ ಪ್ರೀತಿಗೆ ನನ್ನ ಹೃದಯಪೂರ್ವಕ ನಮನ...
ReplyDelete